ಬಿಜೆಪಿ ಶಾಸಕ ಋಷಿಕೇಶ್ ಪಟೇಲ್ ಕಚೇರಿ ಮೇಲೆ ದಾಳಿ ಪ್ರಕರಣ ; ಹಾರ್ದಿಕ್ ಪಟೇಲ್ ಗೆ 2 ವರ್ಷ ಜೈಲು ಶಿಕ್ಷೆ
ಬುಧವಾರ, 25 ಜುಲೈ 2018 (14:21 IST)
ಅಹಮದಾಬಾದ್ : ಬಿಜೆಪಿ ಶಾಸಕ ಋಷಿಕೇಶ್ ಪಟೇಲ್ ಕಚೇರಿ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆಪಾಟೀದಾರ್ ಮೀಸಲು ಆಂದೋಲನ್ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಅವರಿಗೆಕೋರ್ಟ್ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡವಿಧಿಸಿದೆ.
2015ರಲ್ಲಿ ಪಾಟೀದಾರ್ ಮೀಸಲು ಆಂದೋಲನ್ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಅವರ ನೇತೃತ್ವದಲ್ಲಿ ನಡೆದ ಪಟೇಲ್ ಸಮುದಾಯದ ಮೀಸಲು ಹೋರಾಟದ ವೇಳೆ ವಿಸ್ನಗರದಲ್ಲಿರುವ ಬಿಜೆಪಿ ಶಾಸಕ ಋಷಿಕೇಶ್ ಪಟೇಲ್ ಕಚೇರಿ ಮೇಲೆ ಸುಮಾರು 500 ಮಂದಿ ಪಟೇಲ್ ಸಮುದಾಯದವರು ದಾಳಿ ಮಾಡಿದಲ್ಲದೇ ಪತ್ರಕರ್ತರ ಮೇಲೂ ಹಲ್ಲೆ ಕೂಡ ನಡೆಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಹಾಗೂ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ವಿಸ್ನಗರ ಕೋರ್ಟ್ ಹಾರ್ದಿಕ್ ಪಟೇಲ್, ಸರ್ದಾರ್ ಪಟೇಲ್ ಗ್ರೂಪ್ ನ ಲಾಲ್ ಜಿ ಪಟೇಲ್ ಹಾಗೂ ಮತ್ತೋರ್ವ ಪಟಿದಾರ್ ಹೋರಾಟಗಾರ ಅಂಬಾಲಾಲ್ ಪಟೇಲ್ ಅವರನ್ನು ದೋಷಿಗಳೆಂದು ಘೋಷಿಸಿ, ಎಲ್ಲರಿಗೂ ತಲಾ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ನ್ಯಾಯಾಲಯ ವಿಧಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ