ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಬಿಜೆಪಿ ಸಂಸದರಿಗೆ ಹೈಕಮಾಂಡ್ ತಾಕೀತು

ಮಂಗಳವಾರ, 1 ಡಿಸೆಂಬರ್ 2015 (15:10 IST)
ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನದಲ್ಲಿ ಅಸಹಿಷ್ಣುತೆ ವಾತಾವರಣದಲ್ಲಿ ಹೆಚ್ಚಳ ಕುರಿತಂತೆ ಚರ್ಚೆ ನಡೆಯುತ್ತಿರುವಂತೆ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡದಂತೆ ಬಿಜೆಪಿ ಹೈಕಮಾಂಡ್ ಸಂಸದರಿಗೆ ತಾಕೀತು ಮಾಡಿದೆ.
 
ಬಿಜೆಪಿ ಸಂಸದರು ಪ್ರಚೋದನಾಕಾರಿ ಹೇಳಿಕೆ ನೀಡಿದಲ್ಲಿ ವಿಪಕ್ಷಗಳು ಕೇಂದ್ರ ಸರಕಾರವನ್ನು ಸಂಸತ್ತಿನಲ್ಲಿ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ಸಂಸದರಿಗೆ ಫರ್ಮಾನ್ ಹೊರಡಿಸಿದೆ.
 
ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಅಜೆಂಡಾದಿಂದ ಜನತೆಯ ಗಮನವನ್ನು ಬೇರೆ ಕಡೆ ಸೆಳೆಯಲು ವಿಪಕ್ಷಗಳು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ. ಆದರೆ, ಬಿಜೆಪಿ ಸಂಸದರು ಯಾವುದೇ ಕಾರಣಕ್ಕೂ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ. 
 
ಬಿಜೆಪಿ ಮುಖಂಡ ಮುಖ್ತಾರ್ ಅಬ್ಬಾಸ್ ನಖ್ವಿ ಮಾತನಾಡಿ, ಪ್ರಚೋದನಾಕಾರಿ ಹೇಳಿಕೆಗಳು ಕೆಲ ಘಟನೆಗಳಿಂದ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದೆ. ಪಕ್ಷದ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವುದು ಅಗತ್ಯವಾಗಿದೆ ಎಂದರು.
 
ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಮಾತನಾಡಿ, ಜಿಡಿಪಿ ದರ ಶೇ.7.4ಕ್ಕೆ ಏರಿಕೆಯಾಗಿದ್ದು, ದೇಶ ಅಭಿವೃದ್ಧಿಯತ್ತ ಸಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ