ದೆಹಲಿಯಲ್ಲಿ ಇಂದಿನಿಂದ ಬಿಜೆಪಿ ರಾಷ್ಟ್ರೀಯ ಸಮಾವೇಶ

Krishnaveni K

ಶನಿವಾರ, 17 ಫೆಬ್ರವರಿ 2024 (11:10 IST)
Photo Courtesy: Twitter
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಬೆನ್ನಲ್ಲೇ ಇಂದಿನಿಂದ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಢಿದೆ.

ಮಧ‍್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಕಾಲ ಸಮಾವೇಶ ನಡೆಯಲಿದ್ದು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎಲ್ಲಾ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎರಡೂ ದಿನ ಪ್ರಧಾನಿ ಮೋದಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಸಚಿವರು, ನಾಯಕರು, ಸಂಸದರಿಂದ ಹಿಡಿದು ಕ್ಲಸ್ಟರ್ ಮಟ್ಟದ ನೇತರಾರರೂ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಈ ಸಮಾವೇಶದಲ್ಲಿ ರೂಪುರೇಷೆ ಸಿದ್ಧಪಡಿಸಲಾಗುತ್ತದೆ.

ಲೋಕಸಭೆ ಚುನಾವಣೆಗೆ ಜನರ ಬಳಿ ಹೇಗೆ ಹೋಗಬೇಕು, ಯಾವ ವಿಚಾರವನ್ನು ಜನರಿಗೆ ತಲುಪಿಸಬೇಕು, ಯಾವುದಕ್ಕೆ ಮಹತ್ವ ಕೊಡಬೇಕು ಎಂಬಿತ್ಯಾದಿ ವಿಚಾರಗಳಲ್ಲಿ ನಿರ್ಣಯಗಳು ಹೊರಬೀಳಲಿದೆ. ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳ ಗುರಿ ಹಾಕಿಕೊಂಡಿರುವ ಬಿಜೆಪಿ ಇದಕ್ಕಾಗಿ ಯಾವ ರಣತಂತ್ರ ಹೆಣೆಯಬೇಕು ಎಂದು ಈ ಸಮಾವೇಶದಲ್ಲಿ ಪ್ರಸ್ತಾಪವಾಗಲಿದೆ.

ಕರ್ನಾಟಕ ಒಟ್ಟು 530 ನಾಯಕರಿಗೆ ಆಹ್ವಾನ ನೀಡಲಾಗಿದೆ. ಇವರಲ್ಲಿ ಬಿಜೆಪಿ ಕರ್ನಾಟಕದ ಹಿರಿಯ ನಾಯಕರು, ಶಾಸಕರು, ಪರಿಷತ್ ಸದಸ್ಯರು ಸೇರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ