ಲಕ್ನೋ : ರಾಜ್ಯದಲ್ಲಿ ಬಿಜೆಪಿ ಪಕ್ಷವು ಮುಂದಿನ ಐದು ವರ್ಷಗಳಲ್ಲಿ ಪ್ರತಿ ಕುಟುಂಬದ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ಅವಕಾಶಗಳನ್ನು ಒದಗಿಸಲು ಯೋಜಿಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಗೋರಖ್ಪುರದ ಚೌರಿ ಚೌರಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ಪ್ರತಿ ಕುಟುಂಬದ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ನಾವು ಯೋಜಿಸುತ್ತಿದ್ದೇವೆ ಎಂದಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಐದು ಹಂತಗಳ ಮತದಾನ ಈಗಾಗಲೇ ಮುಕ್ತಾಯಗೊಂಡಿದೆ. ಉಳಿದ ಎರಡು ಹಂತಗಳ ಮತದಾನ ಮಾರ್ಚ್ 3 ಮತ್ತು ಮಾರ್ಚ್ 7 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.