ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ನಡುವಿನ ಗಲಾಟೆ ಇದೀಗ ರಾಜ್ಯಪಾಲರ ಅಂಗಳಕ್ಕೆ ತಲುಪಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಡೆಯನ್ನು ಖಂಡಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಗೆ ಬಿಜೆಪಿ ದೂರಿನಲ್ಲಿ ಮನವಿ ಮಾಡಿದೆ.
ಎಂಎಲ್‌ಸಿ ಸಿ.ಟಿ.ರವಿ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸುವಂತೆ ಬಿಜೆಪಿ ನಿಯೋಗ ಮನವಿ ಮಾಡಿದೆ. ಸಿ.ಟಿ ರವಿ ಅವರ ಬಂಧನದ ಹಿಂದಿನ ಸತ್ಯಾಸತ್ಯತೆ ಅರಿಯುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದೆ.
ಬಿಜೆಪಿ ಎಂಎಲ್‌ಸಿ ವಿರುದ್ಧ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಇದು ಸಾಂವಿಧಾನಿಕ ಮತ್ತು ಕಾನೂನು ಉಲ್ಲಂಘನೆಯಾಗಿದೆ. ಪೊಲೀಸರಿಂದ ಅಧಿಕಾರ ದುರುಪಯೋಗ ಆಗಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಬಂಧನದ ಸತ್ಯಾಸತ್ಯತೆ ಹೊರತರಬೇಕು ಎಂದು ಒತ್ತಾಯಿಸಿದ್ದಾರೆ.