ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಟಿಕೆಟ್ ನೀಡಬಾರದು- ಕೆಪಿಸಿಸಿ ಅಧ್ಯಕ್ಷ ದಿನೇಶ್
ಬುಧವಾರ, 13 ನವೆಂಬರ್ 2019 (12:01 IST)
ನವದೆಹಲಿ : ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟವಾಗಿದ್ದು, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಕೋರ್ಟ್ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಇರಬೇಕೆಂದು ಕೋರ್ಟ್ ಹೇಳಿದೆ. ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಟಿಕೆಟ್ ನೀಡಬಾರದು. ಯಾರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೋ ಅಂತವರಿಗೆ ಟಿಕೆಟ್ ನೀಡದೆ ನೈತಿಕತೆ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.