ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್

ಸೋಮವಾರ, 13 ಮಾರ್ಚ್ 2017 (08:21 IST)
ಪಣಜಿ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದೇ ಸಾಕ್ಷಿ. ಗೋವಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಹೊಂದಿದ್ದರೂ, ಸರ್ಕಾರ ರಚನೆಯ ಹಕ್ಕು ಬಿಜೆಪಿ ಪಾಲಾಗಲಿದ್ದು, ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಲಿದ್ದಾರೆ.

 
13 ಸ್ಥಾನದಲ್ಲಿರುವ ಬಿಜೆಪಿ 10 ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚನೆ ಮಾಡಲಿದ್ದು, 17 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂರಬೇಕಾದ ಪರಿಸ್ಥಿತಿ ಎದುರಾಗಿದೆ. ಎರಡೂ ಪಕ್ಷಗಳಿಗೂ ಬಹುಮತ ಸಾಬೀತಿಗೆ ಪಕ್ಷೇತರರ ಸಹಾಯ ಬೇಕಾಗಿತ್ತು. ಆದರೆ ಪಕ್ಷೇತರರು ಬಿಜೆಪಿ ಬೆಂಬಲಿಸುತ್ತಿರುವುದು ಆಡಳಿತಾರೂಢ ಪಕ್ಷಕ್ಕೆ ಲಾಭವಾಗಿ ಪರಿಣಮಿಸಿದೆ.

ಸದ್ಯ ಕೇಂದ್ರದ ರಕ್ಷಣಾ ಸಚಿವರಾಗಿರುವ ಮನೋಹರ್ ಪರಿಕ್ಕರ್ ಗೋವಾ ರಾಜಕೀಯಕ್ಕೆ ಮರಳುತ್ತಿದ್ದು, ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ. ಗೋವಾ ರಾಜ್ಯಪಾಲೆ ಮೃದುಲಾ ಸಿನ್ಹಾ ಪರಿಕ್ಕರ್  ನೇತೃತ್ವದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದು, 15 ದಿನಗಳೊಳಗೆ ಬಹುಮತ ಸಾಬೀತಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ