ಉ.ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ: ಮಹೇಶ್ ಶರ್ಮಾ

ಸೋಮವಾರ, 30 ಮೇ 2016 (17:04 IST)
ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಅಭಿವೃದ್ಧಿ ವಿಷಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದೇ ಹೊರತು ರಾಮಮಂದಿರ ನಿರ್ಮಾಣವಲ್ಲ ಎಂದು ಬಿಜೆಪಿ ಮುಖಂಡ ಕೇಂದ್ರ ಸಚಿವ ಮಹೇಶ್ ಶರ್ಮಾ ಹೇಳಿದ್ದಾರೆ.
 
ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಕಣಕ್ಕಿಳಿಯಲಿದ್ದು 403 ಸೀಟುಗಳಲ್ಲಿ 265 ಸೀಟುಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಠಿಣ ಪರಿಶ್ರಮ, ಉತ್ತಮ ರಣತಂತ್ರಗಳಿಂದಾಗಿ ಬಿಜೆಪಿಗೆ ಹೆಚ್ಚಿನ ಸೀಟುಗಳನ್ನು ಗೆಲ್ಲಿಸಿಕೊಟ್ಟ ಸಚಿವ ಶರ್ಮಾ, ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಮತ್ತದೆ ರಣತಂತ್ರ ರೂಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ಮುಖಂಡ ಮಹೇಶ್ ಶರ್ಮಾ ಅವರ ಪಕ್ಷನಿಷ್ಠೆ ಕಂಡ ಬಿಜೆಪಿ,ಸಚಿವ ಸ್ಥಾನ ನೀಡಿ ಗೌರವಿಸಿದೆ.
 
ಅಭಿವೃದ್ಧಿ, ಉತ್ತಮ ಅಡಳಿತ, ಭ್ರಷ್ಟಾಚಾರ ನಿವಾರಣೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಯ ಪ್ರಮುಖ ವಿಷಯಗಳಾಗಿವೆ. ರಾಮಮಂದಿರ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.   
 
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವುದು ಲಕ್ಷಾಂತರ ಜನತೆಯ ಅಭಿಪ್ರಾಯವಾಗಿದೆ. ಧಾರ್ಮಿಕ ವಿಷಯವನ್ನು ರಾಜಕೀಯ ವಿಷಯವನ್ನಾಗಿಸುವುದು ಸರಿಯಲ್ಲ. ನ್ಯಾಯಾಲಯದ ತೀರ್ಪು ಅಥವಾ ಸರ್ವಸಮ್ಮತಿಯ ಮೇರೆಗೆ ರಾಮಮಂದಿರ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ತಿಳಿಸಿದ್ದಾರೆ.   

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ