ಸೋನಿಯಾ ಗಾಂಧಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕಾಂಗ್ರೆಸ್ ಆರೋಪ

Sampriya

ಶುಕ್ರವಾರ, 31 ಜನವರಿ 2025 (20:25 IST)
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಸಂಸತ್​ನಲ್ಲಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿಕ್ರಿಯಿಸುವಾಗ ರಾಷ್ಟ್ರಪತಿಯವನ್ನು ಪೂರ್ ಲೇಡಿ ಎನ್ನಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಅವರಿಗೆ ಮಾತನಾಡಲೂ ಕಷ್ಟವಾಗುತ್ತಿತ್ತು, ಬಹಳ ಸುಸ್ತಾಗಿದ್ದರು ಎಂದು ಹೇಳಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಈ ಬಗ್ಗೆ ಕಾಂಗ್ರೆಸ್ ಬೇಷರತ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಸೋನಿಯಾ ಗಾಂಧಿಯವರು ನೀಡಿದ ಹೇಳಿಕೆಯನ್ನು ತಿರಚಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ. ಬಿಜೆಪಿ ಸೋನಿಯಾ ಗಾಂಧಿಯ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ನಮ್ಮ ನಾಯಕರು ಎಂದಿಗೂ ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಅವಮಾನಿಸಲು ಸಾಧ್ಯವಿಲ್ಲ. ಇದು ನಮ್ಮ ಸಂಸ್ಕೃತಿಯಲ್ಲ ಎಂದು ಖರ್ಗೆ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ