ಕರ್ನಾಟಕದಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ : ಅಮಿತ್ ಶಾ

ಮಂಗಳವಾರ, 14 ಫೆಬ್ರವರಿ 2023 (13:16 IST)
ನವದೆಹಲಿ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು ಗೆಲುವಿನ ಮಂತ್ರ ಪಠಿಸಿದ್ದಾರೆ.  ಕಳೆದ 2 ತಿಂಗಳಲ್ಲಿ ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ. ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನೂ ನೋಡಿದ್ದೇನೆ ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಜನಾದೇಶ ಸಿಗಲಿದೆ ಎಂದು ಅವರು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ