ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಅಸ್ಸಾಂನ ಬಿಜೆಪಿ ಯುವ ಘಟಕ

ಬುಧವಾರ, 1 ಆಗಸ್ಟ್ 2018 (12:30 IST)
ನವದೆಹಲಿ : ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ )ಯಿಂದಾಗಿ ನಾಗರಿಕ ಯುದ್ಧ, ರಕ್ತಪಾತವಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ಕಾರಣ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.


ಎನ್‌ಆರ್‌ಸಿ ಕುರಿತು ಸುದ್ಧಿಗೋಷ್ಠಿ ನಡೆಸಿದ್ದ ಮಮತಾ ಬ್ಯಾನರ್ಜಿ ಅವರು, 'ತಾಯ್ನಾಡಿನಲ್ಲಿಯೇ ನಿರಾಶ್ರಿತರಾಗುವ ದುಃಸ್ಥಿತಿ ಜನರಿಗೆ ಬಂದಿರುವುದು ವಿಪರ್ಯಾಸ, ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌರತ್ವ ನೋಂದಣಿ ಹಿಂದೆ ಷಡ್ಯಂತ್ರ ಅಡಗಿದೆ' ಎಂದು ಆರೋಪಿಸಿದ್ದರು. ಅಲ್ಲದೇ 'ಕೇಂದ್ರ ಸರ್ಕಾರ ಎನ್‌ಆರ್‌ಸಿ ಅನ್ನು ಅಸ್ತ್ರದಂತೆ ಬಳಸಿಕೊಂಡು ಬಂಗಾಳಿ ಭಾಷಿಕರು, ಬಿಹಾರಿಗಳನ್ನು ಅಸ್ಸಾಂನಿಂದ ಹೊರದಬ್ಬಲು ಷಡ್ಯಂತ್ರ ರೂಪಿಸಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಪಶ್ಚಿಮ ಬಂಗಾಳದ ಮೇಲೆ ನೇರ ಪರಿಣಾಮ ಬೀರಲಿದೆ' ಎಂದು ಹೇಳಿದ್ದರು.


ಈ ಹೇಳಿಕೆಯಿಂದ ಆಕ್ರೋಶಗೊಂಡ ಅಸ್ಸಾಂನ ಬಿಜೆಪಿ ಯುವ ಘಟಕ ನಾಹಾರ್‌ಕಟಿಯಾ ಪೊಲೀಸ್ ಠಾಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ನೀಡಿದೆ. ಆದರೆ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ