ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಚುನಾವಣೆ ಆಯೋಗದಿಂದ ಓವೈಸಿ ಪಕ್ಷಕ್ಕೆ ನಿಷೇಧ
ಬುಧವಾರ, 13 ಜುಲೈ 2016 (19:33 IST)
ತೆರಿಗೆ ಹಾಗೂ ಲೆಕ್ಕಪರಿಶೋಧಿತ ಖಾತೆ ವಿವರಗಳನ್ನು ಸಲ್ಲಿಸದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಚುನಾವಣೆ ಆಯೋಗ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಅಭ್ಯರ್ಥಿಗಳು ಮಹಾರಾಷ್ಟ್ರದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ.
ವರದಿಗಳ ಪ್ರಕಾರ, ಎಐಎಂಐಎಂ ಪಕ್ಷ ಸೇರಿದಂತೆ ಒಟ್ಟು 191 ಸ್ಥಳೀಯ ಪಕ್ಷಗಳ ನೋಂದಣಿಯನ್ನು ರದ್ದುಗೊಳಿಸಿ ಚುನಾವಣೆ ಆಯೋಗ ಆದೇಶ ಹೊರಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಚುನಾವಣೆ ಆಯೋಗದ ಆಯುಕ್ತ ಜೆ.ಎಸ್.ಸಹಾರಿಯಾ, 191 ಪಕ್ಷಗಳ ನೋಂದಣಿಯನ್ನು ರದ್ದುಗೊಳಿಸಲಾಗಿದೆ. ಒಟ್ಟು 359 ಪಕ್ಷಗಳು ನೊಂದಾವಣೆ ಮಾಡಿಕೊಂಡಿದ್ದು, ಅದರಲ್ಲಿ 17 ಪಕ್ಷಗಳು ಅಧಿಕೃತ ಪಕ್ಷಗಳಾಗಿವೆ ಎಂದು ತಿಳಿಸಿದ್ದಾರೆ.
326 ಪಕ್ಷಗಳಿಗೆ ಅಗತ್ಯವಾದ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು. ಹಲವು ಬಾರಿ ಮನವಿ ಮಾಡಿದರೂ ಪಕ್ಷಗಳು ಅಗತ್ಯವಾದ ದಾಖಲೆಗಳನ್ನು ಸಲ್ಲಿಸುವಲ್ಲಿ ವಿಫಲವಾಗಿದ್ದರಿಂದ ಪಕ್ಷಗಳ ನೋಂದಣಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ, ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಬೇಕಾದಲ್ಲಿ ಚುನಾವಣೆ ಆಯೋಗದಲ್ಲಿ ಪಕ್ಷವನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ ಎಂದು ಸಹಾರಿಯಾ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.