ಬೃಹತ್ ಮುಂಬೈ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಉದ್ಭವ್ ಠಾಕ್ರೆ ನೇತೃತ್ವದ ಶಿವಸೇನೆ 95 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಘರ್ಜಿಸಿ ಅಧಿಕಾರದ ಗದ್ದುಗೆಯತ್ತ ಸಾಗಿದೆ. ಆದರೆ, ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಬಿಜೆಪಿ 2ನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ.
ಈ ಚುನಾವಣೆಯಲ್ಲಿ ಮಿತ್ರಪಕ್ಷಗಳಾದ ಶಿವಸೇನಾ, ಬಿಜೆಪಿ ಎದುರಾಳಿಗಳಾಗಿ ಸ್ಪರ್ಧಿಸಿದ್ದವು. ಹಲವಾರು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳಿಂದ ಕಚ್ಚಾಡುತ್ತಿರುವ ಬಿಜೆಪಿ-ಶಿವಸೇನಾ ಈ ಎಲೆಕ್ಷನ್ ಬಳಿಕ ಬ್ರೇಕಪ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂಬೈ ಸೇರಿದಂತೆ 10 ಪಾಲಿಕೆ, 25 ಜಿಲ್ಲಾ ಪರಿಷತ್‌ಗಳಿಗೆ ಚುನಾವಣೆ ನಡೆದಿದ್ದು ಮತ ಎಣಿಕೆ ಮುಂದುವರಿದಿದೆ.