ಮುಂಬೈ : ಅಪರಿಚಿತ ವ್ಯಕ್ತಿಯೊಬ್ಬ ಮುಂಬೈನ ಲಲಿತ್ ಹೋಟೆಲ್ (5ಸ್ಟಾರ್ ಹೋಟೆಲ್)ಗೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದು, ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ ಇಟ್ಟಿದ್ದಾನೆ.
ಅಪರಿಚಿತ ವ್ಯಕ್ತಿಯೊಬ್ಬ ಹೋಟೆಲ್ ಅವರಿಗೆ ಕರೆ ಮಾಡಿ, ಲಲಿತ್ ಹೋಟೆಲ್ನ 4 ಕಡೆ ಬಾಂಬ್ಗಳನ್ನು ಇಡಲಾಗಿದೆ. ಇದನ್ನು ನಿಷ್ಕ್ರಿಯಗೊಳಿಸಬೇಕಾದರೆ 5 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾನೆ. ಘಟನೆ ಸಂಬಂಧಿಸಿ ಸಹಾರ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 5 ದಿನಗಳಲ್ಲಿ ನಡೆದ ಇದು 3ನೇ ಘಟನೆಯಾಗಿದೆ.
ಇತ್ತೀಚೆಗಷ್ಟೇ ಪಾಕಿಸ್ತಾನಿ ಸಂಖ್ಯೆಯಿಂದ 26/11ರ ಮುಂಬೈ ತಾಜ್ ಹೋಟೆಲ್ ಮೇಲೆ ದಾಳಿ ಮಾದರಿ ರೀತಿಯೇ ಭಯೋತ್ಪಾದಕ ದಾಳಿಯ ನಡೆಸುವುದಾಗಿ ನಗರ ಪೊಲೀಸರಿಗೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು 3 ತಂಡಗಳನ್ನು ರಚಿಸಿ ತನಿಖೆ ಕಾರ್ಯದಲ್ಲಿ ತೊಡಗಿದ್ದಾರೆ.
ಮತ್ತೊಂದು ಘಟನೆಯಲ್ಲಿ ರಾಯಗಢದ ಹರಿಹರೇಶ್ವರ ಬೀಚ್ ಬಳಿ ಬೋಟ್ ಪತ್ತೆ ಆಗಿತ್ತು. ಅದರಲ್ಲಿ ಅನೇಕ ಮದ್ದುಗುಂಡುಗಳು ಹಾಗೂ 3 ಎಕೆ 47 ರೈಫೆಲ್ಗಳಿದ್ದವು. ಈ ಎಲ್ಲಾ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆ ಪ್ರದೇಶವನ್ನು ಹೈಅಲರ್ಟ್ ಎಂದು ಘೋಷಿಸಿದ್ದರು.