ನವದೆಹಲಿ : ಮಹಾರಾಷ್ಟ್ರ – ಕರ್ನಾಟಕ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿ ಚರ್ಚೆ ನಡೆಸಿದೆ.
ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ನೇತೃತ್ವದಲ್ಲಿ ಸಂಸದರು ಭೇಟಿಯಾಗಿ ಗಡಿ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಸತ್ನಲ್ಲಿರುವ ಅಮಿತ್ ಶಾ ಕಚೇರಿಯಲ್ಲಿ ಭೇಟಿಯಾದ ಎನ್ಸಿಪಿ , ಕಾಂಗ್ರೆಸ್ , ಉದ್ದವ್ ಠಾಕ್ರೆ ಬಣದ ಶಿವಸೇನೆ ಸಂಸದರು ನಿಯೋಗದಲ್ಲಿ ಭಾಗಿಯಾಗಿದ್ದರು.
ಸಭೆಯಲ್ಲಿ ಗಡಿ ವಿವಾದ ಬಗ್ಗೆ ಚರ್ಚಿಸಿದ್ದು, ಗಡಿಯಲ್ಲಿ ಮರಾಠಿಗರ ಮೇಲೆ ಕರ್ನಾಟಕದಲ್ಲಿ ಹಲ್ಲೆಯಾಗುತ್ತಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ ಸಂಸದರು ಗೃಹ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದರು. ರಾಜ್ಯದ ಎಲ್ಲ ಸಂಸದರು ದಿವ್ಯ ಮೌನವಹಿಸಿದ್ದಾರೆ. ಈವರೆಗೂ ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ಪ್ರಸ್ತಾಪಿಸುವ ಪ್ರಯತ್ನ ಮಾಡಿಲ್ಲ.