ವಿಪಕ್ಷಗಳಿಂದ ಬಹಿಷ್ಕಾರ : ಭಾಗವಹಿಸುತ್ತೇವೆ ಎಂದ 2 ಪಕ್ಷಗಳು

ಗುರುವಾರ, 25 ಮೇ 2023 (09:25 IST)
ಪ್ರಧಾನಿ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಲಿದ್ದು, ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದನ್ನು ವಿಪಕ್ಷಗಳು ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನ ಎಂದು ಆರೋಪಿಸಿವೆ.
 
ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿರುವುದರ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ವಿಪಕ್ಷಗಳು ನೂತನ ಸಂಸತ್ ಕಟ್ಟಡ ಉದ್ಘಾಟನೆ ಒಂದು ಮಹತ್ವದ ಸಂದರ್ಭವಾಗಿದೆ. ಆದರೆ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆ ಹಾಗೂ ಹೊಸ ಸಂಸತ್ತನ್ನು ನಿರ್ಮಿಸಿದ ನಿರಂಕುಶ ವಿಧಾನದ ಬಗ್ಗೆ ನಮ್ಮ ಅಸಮ್ಮತಿ ಹೊರತಾಗಿಯೂ ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಸಂದರ್ಭವನ್ನು ಗುರುತಿಸಲು ನಾವು ಮುಕ್ತರಾಗಿದ್ದೇವೆ.

ಪ್ರಧಾನಿ ಮೋದಿ ಅವರು ಸ್ವತಃ ಸಂಸತ್ ಭವನವನ್ನು ಉದ್ಘಾಟಿಸುವ ನಿರ್ಧಾರ ತೆಗೆದುಕೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ದೊಡ್ಡ ಅವಮಾನವಷ್ಟೇ ಅಲ್ಲದೇ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಹೇಳಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ