ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರಾಣ ತೆಗೆದ ಪ್ರಿಯಕರ

ಭಾನುವಾರ, 19 ಜೂನ್ 2022 (11:02 IST)
ನವದೆಹಲಿ: ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರಿಯಕರ ಪ್ರೇಯಸಿಯ ಪ್ರಾಣ ತೆಗೆದ ಘಟನೆ ದೆಹಲಿಯಲ್ಲಿ ನಡೆದಿದೆ.

ಈ ಸಂಬಂಧ 38 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಈತ ಮಹಿಳೆ ಜೊತೆ ಕೆಲವು ಸಮಯದಿಂದ ಪ್ರೇಮ ಸಂಬಂಧ ಹೊಂದಿದ್ದ. ಆದರೆ ಇತ್ತೀಚೆಗೆ ಆಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು.

ಈ ಕಾರಣಕ್ಕೆ ಆಕೆಯ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಮಹಿಳೆ ನಾಪತ್ತೆಯಾದ ಬಗ್ಗೆ ಮನೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ