ಕಾನ್ಪುರ : ಅಪ್ರಾಪ್ತ ಸಹೋದರಿಯ ಮೇಲೆ ಆಕೆಯ ಸಹೋದರ ಲೈಂಗಿಕ ದೌರ್ಜನ್ಯ ಎಸಗಿ ಯಾರಿಗಾದರೂ ತಿಳಿಸಿದರೆ ತಂದೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಬಚೌಪುರ್ ಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತೆಯ ಕಿರಿಯ ಸಹೋದರ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಈ ವಿಚಾರ ಯಾರಿಗಾದರೂ ತಿಳಿಸಿದರೆ ತಂದೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಸಂತ್ರಸ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.