ಹೈದರಾಬಾದ್: ತೆಲಂಗಾಣದ ಬಿಆರ್ ಎಸ್ ಪಕ್ಷದ ನಾಯಕಿ ಲಾಸ್ಯ ನಂದಿತಾ (33) ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಲಾಸ್ಯ ನಂದಿತಾ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದ ಶಾಸಕಿ. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತಷ್ಟೇ. ಹೈದರಾಬಾದ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಂದಿತಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಲಾಸ್ಯ ನಂದಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಲಾಯಿಸುತ್ತಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅವರ ಸಾವಿಗೆ ಬಿಆರ್ ಎಸ್ ಪಕ್ಷ, ಜನ ಸಂತಾಪ ವ್ಯಕ್ತಪಡಿಸಿದ್ದಾರೆ.
ಗಮನಿಸಬೇಕಾದ ಅಂಶವೆಂದರೆ ಕೆಲವು ದಿನಗಳ ಮೊದಲು ಬಿಆರ್ ಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಲಾಸ್ಯ ನಂದಿತಾ ವಾಪಸ್ ಬರುವಾಗ ಕಾರು ಅಪಘಾತಕ್ಕೀಡಾಗಿದ್ದರು. ಆದರೆ ಆಗ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಅವರ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದರು. ಆದರೆ ಇಂದು ನಡೆದ ಅಪಘಾತದಲ್ಲಿ ನಂದಿತಾ ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ ವರ್ಷ ಇದೇ ಸಮಯ ಅವರ ತಂದೆ ಸಾವನ್ನಪ್ಪಿದ್ದರು. ಈ ವರ್ಷ ಪುತ್ರಿಯ ಸಾವು. ಇದು ಅವರ ಕುಟುಂಬಕ್ಕೆ ಇದು ತೀರಾ ಆಘಾತ ತಂದಿರುವ ಘಟನೆಯಾಗಿದೆ. ಇದಕ್ಕೆ ಮೊದಲೊಮ್ಮೆ ನಂದಿತಾ ಲಿಫ್ಟ್ ನಲ್ಲಿ ಸಿಕ್ಕಿಹಾಕಿಕೊಂಡು ಭಾರೀ ಸುದ್ದಿಯಾಗಿದ್ದರು. ಮೊದಲು ಮೃತದೇಹವನ್ನು ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತದೆ. ಬಳಿಕ ಕೆಲವು ಸಮಯ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.