ದೇಶದ ರೈತರ ಆರ್ಥಿಕ ಸ್ಥಿತಿ ಉತ್ತಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2.50 ಎಕರೆ ಭೂಮಿ ಹೊಂದಿದ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ವಿತ್ತ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಪ್ರಧಾನಮಂತ್ರಿ ಮೋದಿ ಸರಕಾರದ ಕೊನೆಯ ಬಜೆಟ್ ಮಂಡಿಸಿ ಮಾತನಾಡಿದ ಅವರು, ಸಣ್ಣ ಮತ್ತು ಮಧ್ಯಮ ವರ್ಗದ ರೈತರ ಖಾತೆಗಳಿಗೆ ಕೇಂದ್ರ ಸರಕಾರದಿಂದ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಹಂತದ ಅಂಗವಾಗಿ ಶೀಘ್ರದಲ್ಲಿ 2 ಸಾವಿರ ರೂಪಾಯಿಗಳನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುವುದು. ಇದರಿಂದ ದೇಶದ 12 ಕೋಟಿ ರೈತರಿಗೆ ಲಾಭವಾಗಲಿದೆ ಎಂದು ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ.