ನವದೆಹಲಿ : ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ ರಾಜ್ಯದ ಬಜೆಟ್ ಸಿದ್ಧಪಡಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡಲಾಗುತ್ತದೆ. ಉದಾಹರಣೆಗೆ ದೆಹಲಿಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆದು ತಮ್ಮ ಸರ್ಕಾರ ಬಜೆಟ್ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು FY 2022-23ರ ಬಜೆಟ್ಗಾಗಿ ಚರ್ಚೆಯನ್ನು ಪ್ರಾರಂಭಿಸಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಉದ್ಯಮಿಗಳಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ. ಹಾಗಾಗಿ ಪಂಜಾಬ್ನಲ್ಲೂ ಇದೇ ರೀತಿಯಲ್ಲಿ ಬಜೆಟ್ ಸಿದ್ಧಪಡಿಸುತ್ತೇವೆ ಎಂದು ಹೇಳಿದ್ದಾರೆ.