ಬಜೆಟ್ ಬಡವರು, ರೈತರು, ಮಧ್ಯಮ ವರ್ಗದ ಕನಸು ನನಸಾಗಿಸುತ್ತದೆ : ಮೋದಿ

ಗುರುವಾರ, 2 ಫೆಬ್ರವರಿ 2023 (11:21 IST)
ನವದೆಹಲಿ : ಈ ಬಜೆಟ್ ಬಡವರು, ಗ್ರಾಮಸ್ಥರು, ರೈತರು ಮತ್ತು ಮಧ್ಯಮ ವರ್ಗದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
 
ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಜೆಟ್ ಸದೃಢವಾದ ನವ ಭಾರತವನ್ನು ನಿರ್ಮಿಸಲು ಗಟ್ಟಿಯಾದ ಅಡಿಪಾಯವನ್ನು ಹಾಕುತ್ತದೆ ಎಂದರು. 

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಸ್ವಸಹಾಯ ಸಂಘಗಳು ಅವರನ್ನು ಮತ್ತಷ್ಟು ಹೆಚ್ಚಿಸಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ