ಎರಡೂ ಕ್ಷೇತ್ರಗಳ ಪೈಕಿ ಹಾನಗಲ್ ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾದರು. ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಗುರುವಾರ ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಇಂದು ನನ್ನ ನಿವಾಸಕ್ಕೆ ಭೇಟಿ ನೀಡಿ ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಚರ್ಚೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಶಿವಣ್ಣ ಮತ್ತಿತರರು ಈ ವೇಳೆ ಹಾಜರಿದ್ದರು ಎಂದು ಹೇಳಿದ್ದಾರೆ.