ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಸಂಪುಟ ಪುನರ್ರಚನೆಯಾಗಿದ್ದು ಸಚಿವರಾದ ರಿಜಿಜು ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರ ಖಾತೆ ಬದಲಾವಣೆಯಾಗಿದೆ.
ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ. ಸಂಸದೀಯ ವ್ಯವಹಾರ ಮತ್ತು ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಕಾನೂನು ಸಚಿವ ಸ್ಥಾನ ನೀಡಲಾಗಿದೆ.