ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಜೆಡಿಯು ನಕಾರ

ಭಾನುವಾರ, 3 ಸೆಪ್ಟಂಬರ್ 2017 (11:35 IST)
ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಚಿವರ ತಂಡಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಜನತಾ ದಳ ಯುನೈಟೆಡ್ (ಜೆಡಿ ಯು) ಸ್ಪಷ್ಟಪಡಿಸಿದೆ.
"ನಮ್ಮ ರಾಷ್ಟ್ರೀಯ ಅಧ್ಯಕ್ಷರು ಅದನ್ನು ಈಗಾಗಲೇ ಸ್ಪಷ್ಟಪಡಿಸಿದ್ದಾರೆ, ಆದ್ದರಿಂದ ನಾನು ಅಥವಾ ಜೆಡಿ (ಯು) ಸಂಸದರು ಯಾರೊಬ್ಬರೂ ಸಚಿವ ಸಂಪುಟ ಸೇರುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಜೆಡಿ (ಯು) ನಾಯಕ ವಶಿಷ್ಠ ನಾರಾಯಣ್ ಸಿಂಗ್ ತಿಳಿಸಿದ್ದಾರೆ.
 
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಮೊದಲು ಜೆಡಿ (ಯು) ತನ್ನ ಪಕ್ಷದ ಕೇಂದ್ರ ಸಚಿವ ಸಂಪುಟಕ್ಕೆ ಸೇರಿದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಯೊಂದಿಗೆ ಮಾತುಕತೆ ನಡೆಸಲಿಲ್ಲ ಎಂದು ಹೇಳಿದ್ದಾರೆ.
 
ಕೇಂದ್ರದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಬಗ್ಗೆ ಬಿಜೆಪಿ ಹೈಕಮಾಂಡ್‌ನೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಬಿಹಾರ್ ಸಿಎಂ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
 
"ಕ್ಯಾಬಿನೆಟ್ ಪುನರ್ರಚನೆಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ, ಅದರ ಬಗ್ಗೆ ನಾವು ಯಾವುದೇ ಮಾತುಕತೆ ನಡೆಸಿಲ್ಲ. ಮಾಧ್ಯಮದಿಂದ ಈ ಬಗ್ಗೆ ನಮಗೆ ಮಾಹಿತಿ ದೊರಕಿದೆ ಎಂದು ಜೆಡಿಯು ಮುಖಂಡ ವಶಿಷ್ಠ ನಾರಾಯಣ್ ಸಿಂಗ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ