ತಮಿಳುನಾಡಿಗೆ ನೀರು ಬಿಡದಿರಲು ಸಚಿವ ಸಂಪುಟ ಫೈನಲ್ ನಿರ್ಧಾರ

ಬುಧವಾರ, 21 ಸೆಪ್ಟಂಬರ್ 2016 (21:03 IST)
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಿರಲು ಸಚಿವ ಸಂಪುಟ ಅಂತಿಮ ನಿರ್ಧಾರ ತೆಗೆದುಕೊಂಡಿದೆ.
 
ಸರ್ವಪಕ್ಷಗಳ ಸಭೆಯ ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂಕೋರ್ಟ್ ನಿಂದನೆಯಾದರೂ ಪರವಾಗಿಲ್ಲ. ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಸಚಿವ ಸಂಪುಟ ಸಭೆ ಒಮ್ಮತದ ನಿರ್ಣಯ ತೆಗೆದುಕೊಂಡಿದೆ.
 
ಸರ್ವಾನುಮತದ ಅಂಗೀಕಾರ ಪಡೆಯಲು ತೀರ್ಮಾನ ತೆಗೆದುಕೊಳ್ಳಲಾಗಿದ್ದು, ತುರ್ತು ಸಂಪುಟ ಸಭೆಯಲ್ಲಿ ಅಂತಿಮ ಮುದ್ರೆ  ಬಿದ್ದಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಿರಿಯ ಸಚಿವರಾದ ಮಲ್ಲಿಕಾರ್ಜುನ್ ಖರ್ಗೆ, ವೀರಪ್ಪಾ ಮೊಯ್ಲಿ ಸೇರಿದಂತೆ ಹಿರಿಯ ನಾಯಕರು ಕೂಡಾ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡು ಸುಪ್ರೀಂಕೋರ್ಟ್ ಆದೇಶ ಪಾಲಿಸದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ