2018ರಲ್ಲಿ ವಿಧಾನಸಭೆ, ಲೋಕಸಭೆಗೆ ಒಂದೇ ಬಾರಿ ಚುನಾವಣೆ: ಚುನಾವಣೆ ಆಯೋಗ
ಗುರುವಾರ, 5 ಅಕ್ಟೋಬರ್ 2017 (13:29 IST)
ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸಲು ಕೇಂದ್ರ ಚುನಾವಣೆ ಆಯೋಗ ಸನ್ನದ್ಧವಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 2018 ರೊಳಗೆ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸಲು ಸಮರ್ಥವಾಗಿದ್ದೇವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಹೊಸ ಮತ ಯಂತ್ರಗಳನ್ನು ಖರೀದಿಸಿದ ನಂತರ ಸಂಸತ್ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಸೆಪ್ಟಂಬರ್ 2018 ರೊಳಗೆ ಸಿದ್ಧವಾಗುತ್ತೇವೆ ಎಂದು ಚುನಾವಣಾ ಆಯುಕ್ತ ಒ.ಪಿ ರಾವತ್ ತಿಳಿಸಿದ್ದಾರೆ.
ಆದಾಗ್ಯೂ, ನಿರ್ಧಾರ ತೆಗೆದುಕೊಳ್ಳಲು ಮತ್ತು ಅಗತ್ಯವಾದ ಕಾನೂನು ತಿದ್ದುಪಡಿಗಳನ್ನು ಮಾಡಲು ಮತ್ತು ಎಲ್ಲ ಪಕ್ಷಗಳು ಒಪ್ಪಿಗೆ ನೀಡುವ ತೀರ್ಮಾನವು ಸರ್ಕಾರದ ಮೇಲಿದೆ ಎಂದು ಹೇಳಿದ್ದಾರೆ.
2019 ರ ಲೋಕಸಭಾ ಚುನಾವಣೆಗಳೊಂದಿಗೆ ನವೆಂಬರ್-ಡಿಸೆಂಬರ್ 2018 ರಲ್ಲಿ ನಡೆಯಲಿರುವ ಮುಂಬರುವ ರಾಜ್ಯ ಚುನಾವಣೆಯನ್ನು ಸರಿದೂಗಿಸಲು ಕೇಂದ್ರವು ಸಜ್ಜಾಗಿದೆ.
ಪ್ರಸಕ್ತ ವರ್ಷದ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳನ್ನು ನವೆಂಬರ್ 2019ರ ಲೋಕಸಭೆ ಚುನಾವಣೆಯೊಂದಿಗೆ ನಡೆಸುವುದು ಸೂಕ್ತ ಎಂದು ಕೇಂದ್ರ ಸರಕಾರ ಅಭಿಪ್ರಾಯಪಟ್ಟಿದೆ.
ಕಾರ್ಯರೂಪಕ್ಕೆ ಬಂದರೆ, ಏಪ್ರಿಲ್ 2019 ರ ಹೊತ್ತಿಗೆ ಸಾರ್ವತ್ರಿಕ ಚುನಾವಣೆಗಳಿಗಾಗಿ ವಿಧಾನಸಭೆ ಚುನಾವಣೆಗಳನ್ನು ಮುಂದೂಡಲಾಗುವ ಸಾಧ್ಯತೆಗಳಿವೆ ಎಂದು ಕೇಂದ್ರ ಚುನಾವಣೆ ಆಯೋಗದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.