ಪಕ್ಷದ ಹಿರಿಯ ನಾಯಕರೊಂದಿಗೆ ವೈಮನಸ್ಸಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್, ಮುಂಬರುವ 2017ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಅಖಿಲೇಶ್ ಯಾದವ್ ಸಿಎಂ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನೇತಾಜಿ ನಿರ್ಧಾರವನ್ನು ಸ್ವೀಕರಿಸುತ್ತೇವೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಖಿಲೇಶ್ ಯಾದವ್ ಯಾಕೆ ನಿಮ್ಮ ಖಾತೆಗಳನ್ನು ಕಿತ್ತುಕೊಂಡಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಖಾತೆಗಳನ್ನು ಯಾಕೆ ಕಿತ್ತುಕೊಂಡಿದ್ದಾರೆ ಎನ್ನುವ ಬಗ್ಗೆ ಗೊತ್ತಿಲ್ಲ. ಸಿಎಂ ಮತ್ತು ನೇತಾಜಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್ ಹೇಳಿದ್ದಾರೆ.