ಸೋಶಿಯಲ್ ಮೀಡಿಯಾದಲ್ಲಿ ಆರೋಪಿಸುವವರನ್ನು ಜೈಲಿಗೆ ಕಳುಹಿಸಕ್ಕೆ ಆಗಲ್ಲ: ಸುಪ್ರೀಂ ಕೋರ್ಟ್‌

Sampriya

ಸೋಮವಾರ, 8 ಏಪ್ರಿಲ್ 2024 (20:00 IST)
Photo Courtesy X
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡುವವರನ್ನೆಲ್ಲ ಜೈಲಿಗೆ ಕಳುಹಿಸಿದರೆ, ಲೋಕಸಭೆ ಚುನಾವಣೆಗೂ ಮುನ್ನಾ ಎಷ್ಟು ಮಂದಿಯನ್ನು ಜೈಲಿಗೆ ಕಳುಹಿಸಬೇಕಾಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಯುಟ್ಯೂಬರ್ ಎ. ದೊರೈಮುರುಗನ್ ಸಟ್ಟೈ ಅವರಿಗೆ ಜಾಮೀನು ಮಂಜೂರು ಮಾಡಿ ಸುಪ್ರೀಂ ಕೋರ್ಟ್ ಹೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್‌. ಓಕಾ ಮತ್ತು ಉಜ್ಜಲ್ ಭುಯಾನ್‌ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಅದಲ್ಲದೆ  ಜಾಮೀನಿನ ಮೇಲಿರುವಾಗ ಅವಹೇಳನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯ ಸಟ್ಟೈ ಅವರಿಗೆ ಆದೇಶಿಸಬೇಕು ಎಂಬ ವಕೀಲ ರೋಹಟಗಿ ಅವರ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.ಸುಪ್ರೀಂ ಕೋರ್ಟ್‌ ಮೇಟ್ಟಿಲೇರಿದ್ದರು.
'

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ