ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲು

ಬುಧವಾರ, 17 ಫೆಬ್ರವರಿ 2016 (16:58 IST)
ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾಲಯ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಲಹಾಬಾದ್‌ನಲ್ಲಿ ಕೇಸ್ ದಾಖಲಿಸಲಾಗಿದೆ.
 
ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಮೂಲಕ, ರಾಹುಲ್ ಗಾಂಧಿ ದೇಶದ್ರೋಹ ನಿಲುವು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
 
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾರ್ಚ್ 1 ರಂದು ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
 
ಪಟಿಯಾಲಾ ಕೋರ್ಟ್ ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿದ ರಾಹುಲ್, ಆರೆಸ್ಸೆಸ್ ಜನಾಭಿಪ್ರಾಯಗಳನ್ನು ತುಳಿಯಲು ಪ್ರಯತ್ನಿಸುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ತಿರಸ್ಕರಿಸಿ ಹೋರಾಟ ಮುಂದುವರಿಸುತ್ತದೆ ಎಂದು ಘೋಷಿಸಿದ್ದಾರೆ.
 
ಆರೆಸ್ಸೆಸ್ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಉಪಕುಲಪತಿಗಳಾಗಿ ನೇಮಿಸಿ ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸಲಾಗುತ್ತಿದೆ. ದೆಹಲಿ, ಹೈದ್ರಾಬಾದ್, ಲಕ್ನೋ ವಿಶ್ವವಿದ್ಯಾಲಯಗಳಲ್ಲಿ ಕೂಡಾ ಇಂತಹ ಪ್ರಯತ್ನಗಳು ನಡೆದಿವೆ. ಆದರೆ, ಕಾಂಗ್ರೆಸ್ ಪಕ್ಷ ಇಂತಹ ಪ್ರಯತ್ನಗಳ ವಿರುದ್ಧ ನಿರಂತರವಾಗಿ ಹೋರಾಟ ಮುಂದುವರಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ.

ವೆಬ್ದುನಿಯಾವನ್ನು ಓದಿ