ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ : ಗೆಹ್ಲೋಟ್

ಶನಿವಾರ, 6 ಆಗಸ್ಟ್ 2022 (13:35 IST)
ನವದೆಹಲಿ : ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಬಂದ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಬೆಲೆ ಏರಿಕೆ, ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂತದೊಂದು ಮಹತ್ವದ ಹೇಳಿಕೆ ನೀಡಿದ್ದಾರೆ.  

ಸುದ್ದಿಗೋಷ್ಠಿ ಸಂದರ್ಭದಲ್ಲಿ ಅತ್ಯಾಚಾರ ಮತ್ತು ಕೊಲೆಗಳ ಬಗ್ಗೆ ಪ್ರಸ್ತಾಪವಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಿರ್ಭಯಾ ಪ್ರಕರಣದ ಬಳಿಕ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂಬ ಬೇಡಿಕೆಯು ವೇಗ ಪಡೆದುಕೊಂಡಿತು ಮತ್ತು ನಂತರ ಕಾನೂನು ಜಾರಿಗೆ ಬಂದಿತು. ಇಂತಹ ಪರಿಸ್ಥಿತಿಯಲ್ಲಿ ಅತ್ಯಾಚಾರದ ನಂತರ ಮಹಿಳೆಯರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ದೇಶದಲ್ಲಿ ಅಪಾಯಕಾರಿ ಪ್ರವೃತ್ತಿಯಾಗಿ ಹೊರಹೊಮ್ಮಿದೆ ಎಂದರು.

ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆ ತನ್ನ ವಿರುದ್ಧ ಸಾಕ್ಷಿಯಾಗುತ್ತಾಳೆ ಎಂದು ಅತ್ಯಾಚಾರಿ ಭಾವಿಸುತ್ತಾನೆ. ಹೀಗಾಗಿ ಅವನು ಅತ್ಯಾಚಾರ ಮಾಡಿ ಕೊಲೆ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ.

ದೇಶಾದ್ಯಂತ ಬರುತ್ತಿರುವ ವರದಿಗಳು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ದೇಶದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ, ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಬಿಕ್ಕಟ್ಟಿನ ಸಮಯ, ನಾವು ಇದನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ