ಕಾವೇರಿ ವಿವಾದ: ಆದೇಶ ಮಾರ್ಪಾಡು ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಜಾ

ಶುಕ್ರವಾರ, 7 ಏಪ್ರಿಲ್ 2017 (15:09 IST)
ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಾಡುಗೊಳಿಸುವಂತೆ ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗಳಿಸಿದೆ.
 
ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.
 
ಸುಪ್ರೀಂಕೋರ್ಟ್, 2016 ಸೆಪ್ಟೆಂಬರ್ 16 ರಿಂದ ಸೆಪ್ಟೆಂಬರ್ 30 ರವರೆಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಆದೇಶಿಸಿತ್ತು. ಆದರೆ, ಕಾವೇರಿ ಜಲಾನಯನದಲ್ಲಿ ಕುಡಿಯುವ ನೀರಿಗೆ ಕೊರತೆ ಎದುರಾಗಿದ್ದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎನ್ನುವುದು ರಾಜ್ಯದ ವಾದವಾಗಿತ್ತು. 
 
ರಾಜ್ಯದ ಕಾವೇರಿ ಕಣಿವೆಯಲ್ಲಿ ನೀರಿಲ್ಲದ ಕಾರಣ ಆದೇಶ ಮಾರ್ಪಾಡು ಮಾಡುವಂತೆ ಕರ್ನಾಟಕ ಸರಕಾರ ಅರ್ಜಿ ಸಲ್ಲಿಸಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಮತ್ತೆ ರಾಜ್ಯಕ್ಕೆ ಬರೆ ನೀಡಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ