ಸುಪ್ರೀಂಗೆ ಕೇಂದ್ರದಿಂದ ಕೇವಿಯಟ್?

ಬುಧವಾರ, 22 ಜೂನ್ 2022 (13:23 IST)
ನವದೆಹಲಿ : ಅಗ್ನಿಪಥ್ ಸೇವಾ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ,
 
ನ್ಯಾಯಾಲಯವು ಸರ್ಕಾರದ ಪರವಾದ ವಾದವನ್ನು ಆಲಿಸಬೇಕು ಎಂದು ಕೋರಿ ಕೇಂದ್ರವು ಸುಪ್ರೀಂ ಕೋರ್ಟ್ಗೆ ಕೇವಿಯಟ್ ಸಲ್ಲಿಸಿದೆ. ಕೇಂದ್ರದ ನೂತನ ಯೋಜನೆ ಆಗಿರುವ ಅಗ್ನಿಪಥ್ ವಿರೋಧಿಸಿ ದೇಶದ ಹಲವಾರು ಭಾಗದಲ್ಲಿ ಪ್ರತಿಭಟನೆಯ ಕಿಚ್ಚು ಹತ್ತಿದೆ.

ಅನೇಕ ಸಾರ್ವಜನಿಕ ಆಸ್ತಿ ಪಾಸ್ತಿಗಳು ಇದರಿಂದ ನಾಶವಾಗಿದೆ. ಇದೀಗ ಇದನ್ನು ವಿರೋಧಿ ಅನೇಕರು ಸುಪ್ರೀಂ ಕೋರ್ಟ್ನ ಮಧ್ಯ ಪ್ರವೇಶವನ್ನು ಬಯಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಗ್ನಿಪಥ್ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ 3 ಅರ್ಜಿಗಳನ್ನು ಸಲ್ಲಿಸಲಾಗಿದೆ.

ಇದಕ್ಕೆ ಸಂಬಂಧಿಸಿ ನಿನ್ನೆಯೂ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು ವಕೀಲ ಹರ್ಷ ಅಜಯ್ ಸಿಂಗ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ಅರ್ಜಿಯಲ್ಲಿ ಈ ಯೋಜನೆಯಿಂದಾಗಿ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಯೂ ನಡೆದಿದೆ.

ಈ ಹಿನ್ನೆಲೆಯಲ್ಲಿ ಕೋರ್ಟ್ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಮರುಪರಿಶೀಲಿಸಲು ಕೇಂದ್ರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ