ಪ್ರಕರಣದಲ್ಲಿ ಸಿಲುಕಿಸುವಂತೆ ನನ್ನ ಮೇಲೆ ಸಿಬಿಐ ಒತ್ತಡ ಹೇರಿತ್ತು : ಅಮಿತ್ ಶಾ

ಶುಕ್ರವಾರ, 31 ಮಾರ್ಚ್ 2023 (09:15 IST)
ನವದೆಹಲಿ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಸಿಲುಕಿಸುವಂತೆ ಕೇಂದ್ರೀಯ ತನಿಖಾ ದಳ ತಮ್ಮ ಮೇಲೆ ಒತ್ತಡ ಹೇರಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
 
ನರೇಂದ್ರ ಮೋದಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರಪಯೋಗಪಡಿಸಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಪಾದಿತ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಿತ್ತು.

ಬಿಜೆಪಿ ಎಂದಿಗೂ ಗದ್ದಲ ಎಬ್ಬಿಸಲಿಲ್ಲ. ಮೋದಿ ಹೆಸರನ್ನು ಹೇಳುವಂತೆ ನನ್ನ ವಿರುದ್ಧ ಸಿಬಿಐ ಒತ್ತಡ ಹೇರಿತ್ತು. ಮೋದಿ ಹೆಸರನ್ನು ಹೇಳಿದರೆ ನನ್ನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಆದರೆ ನಾನು ಮೋದಿ ಹೆಸರನ್ನು ಹೇಳದ ಕಾರಣ ಜೈಲಿಗೆ ಹೋಗಬೇಕಾಯಿತು ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ