ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

Sampriya

ಭಾನುವಾರ, 6 ಜುಲೈ 2025 (13:56 IST)
Photo Credit X
ಕೋಲ್ಕತ್ತ: ದೇಶದಾದ್ಯಂತ ಸದ್ದು ಮಾಡಿರುವ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಪ್ರಕರಣದ ಮುಖ್ಯ ಆರೋಪಿ ತೃಣಮೂಲ ಕಾಂಗ್ರೆಸ್‌ ಮುಖಂಡ ಶಹಜಹಾನ್‌ ಶೇಖ್‌ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ಆರು ವರ್ಷಗಳ ಹಿಂದೆ ಲೋಕಸಭಾ ಚುನಾವಣಾ ನಂತರದ ಸಂದೇಶ್‌ಖಾಲಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರಾದ ಪ್ರದೀಪ್ ಮೊಂಡಲ್, ದೇವದಾಸ್ ಮೊಂಡಲ್ ಮತ್ತು ಸುಕಾಂತ ಮೊಂಡಲ್ ಅವರನ್ನು ಹತ್ಯೆ ಮಾಡಲಾಗಿತ್ತು. ನಂತರ ನಡೆದ ಪ್ರತಿಭಟನೆಗಳು ಹಾಗೂ ಹಿಂಸಾಚಾರದಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಲಾಗಿತ್ತು. ಶಹಜಹಾನ್‌ ಶೇಖ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಸಂತ್ರಸ್ತರ ಕುಟುಂಬಗಳು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಮನವಿ ಮಾಡಿದ್ದವು.  ಇದು ಗಂಭೀರ ಪ್ರಕರಣವಾಗಿದ್ದು ತನಿಖೆಯನ್ನು ಸಿಬಿಐಗೆ ವಹಿಸಿಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಜೂನ್ 30ರಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.

ಸಂದೇಶ್‌ಖಾಲಿ ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಶೇಖ್‌ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2024ರ ಜನವರಿ 5ರಂದು ಬಂಧಿಸಿದ್ದರು. ಸದ್ಯ ಶೇಖ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ