ನವದೆಹಲಿ: ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಈಚೆಗೆ ಟಿಎಂಸಿ ಪಕ್ಷಕ್ಕೆ ಗುಡ್‌ಬೈ ಹೇಳಿ ಬಿಜೆಪಿ ಸೇರಿದ್ದರು. ಈಗ ಅವರಿಗೆ ಕೇಂದ್ರ ಗೃಹ ಸಚಿವಾಲಯ ಎಕ್ಸ್ ಶ್ರೇಣಿಯ ಭದ್ರತೆ ಒದಗಿಸಿದೆ. ಅವರ ರಕ್ಷಣೆಗೆ ಸಿಐಎಸ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಪೇಸ್ ಪ್ರವೇಶ ರಾಜಕೀಯವಾಗಿ ಗಮನಸೆಳೆಯುತ್ತಿದೆ.
ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಕ್ಸ್ ಶ್ರೇಣಿಯ ಭದ್ರತೆಯಲ್ಲಿ ಸೀಮಿತ ಸಂಖ್ಯೆಯ ಭದ್ರತಾ ಸಿಬ್ಬಂದಿ ಇರಲಿದ್ದಾರೆ.
52 ವರ್ಷದ ಪೇಸ್, ಬಿಜೆಪಿ ಸೇರ್ಪಡೆಯನ್ನು ಜವಾಬ್ದಾರಿ ಎಂದು ಹೇಳಿದ್ದು, ದೇಶ ಸೇವೆಗೆ ಇದು ಅವಕಾಶ ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು ಅವರು ತೃಣಮೂಲ ಕಾಂಗ್ರೆಸ್ ಜೊತೆ ಸಂಪರ್ಕ ಹೊಂದಿದ್ದರು.