ಹೈಕೋರ್ಟ್ ನೇತೃತ್ವದಲ್ಲಿ ನ್ಯಾಯಾಧಿಕರಣ ರಚಿಸಿದ ಕೇಂದ್ರ

ಗುರುವಾರ, 6 ಅಕ್ಟೋಬರ್ 2022 (13:36 IST)
ನವದೆಹಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ವಿಧಿಸಲಾಗಿರುವ ನಿಷೇಧವನ್ನು ಪರಿಶೀಲಿಸುವ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ,
 
ನ್ಯಾಯಮಂಡಳಿಯ ಅಧ್ಯಕ್ಷರಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಈಗ PFI ತನ್ನ ವಾದವನ್ನು ನ್ಯಾಯಮಂಡಳಿಯ ಮುಂದೆ ಮಂಡಿಸಲು ಅವಕಾಶ ಹೊಂದಿರುತ್ತದೆ. ಸರ್ಕಾರದ ನಿರ್ಧಾರವನ್ನು ಇಲ್ಲಿ PFI ಪ್ರಶ್ನೆ ಮಾಡಬಹುದಾಗಿದೆ. ವಿಚಾರಣೆ ಬಳಿಕ ನ್ಯಾಯ ಮಂಡಳಿ, ಸರ್ಕಾರದ ನಿಲುವಿನ ಬಗ್ಗೆ ತನ್ನ ತೀರ್ಪು ನೀಡಲಿದೆ.

ಕೇಂದ್ರ ಸರ್ಕಾರ ಸೆಪ್ಟೆಂಬರ್ 28 ರಂದು ಯುಎಪಿಎ ಸೆಕ್ಷನ್ 3 ರ ಅಡಿಯಲ್ಲಿ ಪಿಎಫ್ಐ ಕಾನೂನುಬಾಹಿರ ಎಂದು ಘೋಷಿಸಿತು. ಐದು ವರ್ಷಗಳ ಕಾಲ ಅದರ ಮೇಲೆ ನಿಷೇಧ ಹೇರಿತು.

ಸಂಘಟನೆಯು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಯುಂಟು ಮಾಡುವ ‘ಕಾನೂನುಬಾಹಿರ ಚಟುವಟಿಕೆʼಗಳಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ