ಕನ್ನಡದಲ್ಲೂ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆ ಬರೆಯಬಹುದು

ಭಾನುವಾರ, 16 ಏಪ್ರಿಲ್ 2023 (11:35 IST)
ನವದೆಹಲಿ : ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಯಲ್ಲಿ ಆಯೋಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
 
ಸರ್ಕಾರ ನಿರ್ಧಾರಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಷಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಸ್ಸಾಂ, ಬೆಂಗಾಳಿ, ಗುಜರಾತಿ, ಮರಾಠಿ, ಮಲೆಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಯಯಲ್ಲಿ ಇನ್ನು ಮುಂದೆ ಪರೀಕ್ಷೆ ಬರೆಯಬಹುದು.

ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಆಯೋಜನೆ ಮಾಡಿದ್ದಕ್ಕೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ 13 ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಆಯೋಜನೆ ಮಾಡಲು ಮುಂದಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ