ಕೇಂದ್ರ ಬಜೆಟ್ 2019: ಎಲೆಕ್ಟ್ರಿಕ್ ವಾಹನ ಖರೀದಿಸಿದರೆ ಲಾಭವೋ ಲಾಭ

ಶುಕ್ರವಾರ, 5 ಜುಲೈ 2019 (12:54 IST)
ನವದೆಹಲಿ: 2019 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಘೋಷಣೆಗಳನ್ನು ಮಾಡಿದ್ದು, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡುವ ಯೋಜನೆ ಘೋಷಣೆ ಮಾಡಿದ್ದಾರೆ.


ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕೆ ಕೇಂದ್ರ ಭರ್ಜರಿ ಘೋಷಣೆ ಮಾಡಿದೆ. 10 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಕಾರು ಮಾಡಿದರೆ 1.25 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ.

ಅಷ್ಟೇ ಅಲ್ಲ, ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ ಟಿಯನ್ನು ಶೇ. 12 ರಿಂದ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಇಂದು ಈ ವಾಹನಗಳನ್ನು ಉತ್ಪನ್ನ ಮಾಡುವ ಕಂಪನಿಗೆ ಜಿಎಸ್ ಟ ಇಲ್ಲ ಎಂದು ಸಚಿವೆ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ