ನೀರವ್ ಮೋದಿ ಬಂಧನಕ್ಕೆ ಹೊಸ ತಂತ್ರ ರೂಪಿಸಿದ ಕೇಂದ್ರ ವಿದೇಶಾಂಗ ಇಲಾಖೆ

ಬುಧವಾರ, 27 ಜೂನ್ 2018 (15:58 IST)
ನವದೆಹಲಿ : ಭಾರತೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು, ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಆಭರಣ ಉದ್ಯಮಿ ನೀರವ್ ಮೋದಿ ಬಂಧನಕ್ಕಾಗಿ ಬಲೆ ಬೀಸಿರುವ ಕೇಂದ್ರ ವಿದೇಶಾಂಗ ಇಲಾಖೆಗೆ ಆತ  ಯೂರೋಪಿಯನ್ ದೇಶಗಳಲ್ಲಿ ತಲೆಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿರುವ ಹಿನ್ನಲೆಯಲ್ಲಿ ಯೂರೋಪ್ ನ ಮೂರು ರಾಷ್ಟ್ರಗಳಿಗೆ ಪತ್ರ ಬರೆದಿದೆ.


ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮೂಲಗಳ ಪ್ರಕಾರ ಉದ್ಯಮಿ ನೀರವ್ ಮೋದಿ ಯೂರೋಪಿಯನ್ ದೇಶಗಳಲ್ಲಿ ತಲೆಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆದಕಾರಣ ಕೇಂದ್ರ ವಿದೇಶಾಂದ ಇಲಾಖೆ ಫ್ರಾನ್ಸ್, ಬ್ರಿಟನ್ ಮತ್ತು ಬೆಲ್ಜಿಯಂ ಸರ್ಕಾರಗಳಿಗೆ ಪತ್ರ ಬರೆದು ಉದ್ಯಮಿ ನೀರವ್ ಮೋದಿ ಕುರಿತಂತೆ ಭಾರತೀಯ ತನಿಖಾ ಸಂಸ್ಥೆಗಳು ನಡೆಸುತ್ತಿರುವ ತನಿಖೆಗೆ ನೆರವು ನೀಡಬೇಕು ಮನವಿ ಮಾಡಿಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ