ಸಾಲ ಮನ್ನಾ ಯೋಜನೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ; ಸಿಎಂ ಕುಮಾರಸ್ವಾಮಿ ಬೇಡಿಕೆ

ಭಾನುವಾರ, 17 ಜೂನ್ 2018 (15:09 IST)
ನವದೆಹಲಿ : ಭಾನುವಾರ (ಇಂದು) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ರೈತರ ಸಾಲ ಮನ್ನಾ ಮಾಡಲು ನಮ್ಮ ಸರ್ಕಾರ ಪಣ ತೊಟ್ಟಿದೆ. ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಶೇಕಡಾ 50 ರಷ್ಟು ಅನುದಾನ ನೀಡಬೇಕು. ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿ ಕರ್ನಾಟಕದ 85 ಲಕ್ಷ ರೈತರು ಸಾಲ ಪಡೆದುಕೊಂಡಿದ್ದಾರೆ. ಹೀಗಾಗಿ ಸಾಲ ಮನ್ನಾ ಯೋಜನೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಎಂದು ಕುಮಾರಸ್ವಾಮಿ  ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ