ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂಬ ನಿಯಮಕ್ಕೆ ಬದಲಾವಣೆ ತಂದ ಕೇಂದ್ರ ಸರ್ಕಾರ

Krishnaveni K

ಮಂಗಳವಾರ, 24 ಡಿಸೆಂಬರ್ 2024 (10:01 IST)
ನವದೆಹಲಿ: ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಎಂದು ಘೋಷಿಸಬಾರದು ಎಂದು ಇದುವರೆಗೆ ಇದ್ದಿದ್ದ ನಿಯಮಕ್ಕೆ ಕೇಂದ್ರ ಸರ್ಕಾರ ಬದಲಾವಣೆ ತಂದಿದೆ. ಇನ್ನೀಗ ಹೊಸ ನಿಯಮ ಜಾರಿಗೆ ಬರಲಿದೆ.

ಇದುವರೆಗೆ 5 ರಿಂದ 8ರವರೆಗಿನ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಬಾರದು ಎಂಬ ನಿಯಮವಿತ್ತು. ಇದರಿಂದಾಗಿ ಪಾಸ್, ಫೇಲ್ ಎಂಬ ಪರಿಕಲ್ಪನೆಯೇ ಇರಲಿಲ್ಲ. ಆದರೆ ಇನ್ನೀಗ 5 ಮತ್ತು 6 ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂದು ಹೊಸ ನಿಯಮ ತರಲಾಗಿದೆ.

ಅನುತ್ತೀರ್ಣ ರಹಿತ ನಿಯಮಕ್ಕೆ ಬದಲಾವಣೆ ತರಲು 2019 ರಲ್ಲೇ ಕೇಂದ್ರ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತಂದಿತ್ತು. ಅದರಂತೆ ಇನ್ನು ಮುಂದೆ 5,5 ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಕಡಿಮೆ ಅಂಕ ಬಂದಲ್ಲಿ ಫೇಲ್ ಮಾಡಲು ಅವಕಾಶ ಸಿಗಲಿದೆ.

ಒಂದು ವೇಳೆ 5,6 ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ 2 ತಿಂಗಳಲ್ಲಿ ಪೂರಕ ಪರೀಕ್ಷೆ ಬರೆಯಬೇಕು. ಪೂರಕ ಪರೀಕ್ಷೆಯಲ್ಲೂ ಅನುತ್ತೀರ್ಣರಾದರೆ ಮತ್ತೊಂದು ವರ್ಷ ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ. ರಾಜ್ಯದ ಸರ್ಕಾರೀ ಶಾಲೆ ಮತ್ತು ಸಿಬಿಎಸ್ ಇ ಶಾಲೆಗಳಿಗೆ ಇದು ಅನ್ವಯವಾಗುವುದಿಲ್ಲ. ಕೇಂದ್ರೀಯ, ನವೋದಯ ಮತ್ತು ಸೈನಿಕ ಶಾಲೆಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿಗಳನ್ನು ಪೂರಕ ಪರೀಕ್ಷೆಗೆ ಸಿದ್ಧ ಮಾಡುವ ಹೊಣೆ ಶಿಕ್ಷಕರದ್ದಾಗಿರುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ