Central Budget 2025 live: ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿ ಭವನದತ್ತ ಹೊರಟ ನಿರ್ಮಲಾ ಸೀತಾರಾಮನ್ (Video)
ಇಂದು ಮೋದಿ ಸರ್ಕಾರ ಮೂರನೇ ಅವಧಿಯ ಮೊದಲ ಪರಿಪೂರ್ಣ ಬಜೆಟ್ ಮಂಡನೆಯಾಗಲಿದೆ. ಈ ಬಜೆಟ್ ನಲ್ಲಿ ಮಧ್ಯಮ ವರ್ಗದವರ ಆರ್ಥಿಕ ಸ್ಥಿತಿ ಸುಧಾರಿಸಲು ಸಾಕಷ್ಟು ಕೊಡುಗೆಗಳನ್ನು ಇಡೀ ದೇಶವೇ ನಿರೀಕ್ಷೆ ಮಾಡುತ್ತಿದೆ.
ಈ ಮಹತ್ವದ ಬಜೆಟ್ ಮಂಡನೆಗೆ ಮುನ್ನ ನಿಯಮದಂತೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಅದಾದ ಬಳಿಕ ಅವರು ಸಂಸತ್ ನತ್ತ ಆಗಮಿಸಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್ ನಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 10.25 ಕ್ಕೆ ಸಚಿವ ಸಂಪುಟ ನಡೆಯಲಿದ್ದು ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ. ಸತತ 8 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಇದನ್ನು ಸಂಸತ್ ಚಾನೆಲ್ ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.