ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳ ನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.
ನಿನ್ನೆ ಈ ಘಟನೆಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಂತಹ ಘಟನೆಗಳನ್ನು ನಿಯಂತ್ರಿಸುವುದು ತುಂಬಾ ಕಷ್ಟ. ಹೊಸ ವರ್ಷ, ಕ್ರಿಸ್ಮಸ್ ಸಂದರ್ಭದಲ್ಲಿ ಅಪಾರ ಪ್ರಮಾಣದಲ್ಲಿ ಯುವಕ-ಯುವತಿಯರು ಸೇರುತ್ತಾರೆ. ಈ ಸಂದರ್ಭದಲ್ಲಿ ಕಿರುಕುಳದಂತಹ ಘಟನೆಗಳು ನಡೆಯುವುದು ಸಾಮಾನ್ಯ. ಬೆಂಗಳೂರನ್ನು ದೂಷಿಸುವುದು ಸರಿಯಲ್ಲ.ಈ ರೀತಿಯ ಕಾರ್ಯಕ್ರಮಗಳು ನಗರದಿಂದ ಹೊರವಲಯದಲ್ಲಿ ನಡೆಸಬೇಕು. ಹೊಸವರ್ಷ, ಕ್ರಿಸ್ಮಸ್ ಸಭ್ಯತೆ ತೋರುವ ಬಟ್ಟೆ ಧರಿಸುವಂತೆ ಹೇಳುವುದೂ ಅಸಾಧ್ಯ. ಆದರೆ, ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೊಣೆಗೇಡಿತನದ ಹೇಳಿಕೆ ನೀಡಿದ್ದರು.