ಹನುಮಾನ್ 100 ಒಳಗೆ ಚಾಲೀಸಾ ಪಠಿಸುವಂತಿಲ್ಲ: ಮಹಾರಾಷ್ಟ್ರ ಸರ್ಕಾರ
ಸೋಮವಾರ, 18 ಏಪ್ರಿಲ್ 2022 (13:56 IST)
ಮುಂಬೈ : ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು.
ಇಲ್ಲದೇ ಇದ್ದರೆ ಹನುಮಾನ್ ಚಾಲೀಸಾ ಅನ್ನು ಪಠಿಸಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್ಠಾಕ್ರೆ ಒತ್ತಾಯಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಂಬೈ ಪೊಲೀಸ್ ಆಯುಕ್ತರು ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿ ಸಿದ್ಧಪಡಿಸಲಿದ್ದು, ಒಂದೆರಡು ದಿನಗಳಲ್ಲೇ ಹೊರಡಿಸಲಾಗುವುದು.
ಅಲ್ಲದೆ ಮಸೀದಿಯ 100 ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಪೊಲೀಸ್ ಮಹಾನಿರ್ದೇಶಕ ರಜನೀಶ್ ಸೇಠ್ ಮತ್ತು ಮುಂಬೈ ಸಿ.ಪಿ.ಸಂಜಯ್ ಪಾಂಡೆ ಅವರು, ಧ್ವನಿವರ್ಧಕಗಳ ಬಳಕೆಯ ಕುರಿತು ರಾಜ್ಯಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದಾರೆ.