ಛತ್ತಿಸ್‌ಗಢ ಸಿಎಂ ಉಪಕಾರ್ಯದರ್ಶಿ ಅರೆಸ್ಟ್

ಶನಿವಾರ, 3 ಡಿಸೆಂಬರ್ 2022 (12:25 IST)
ರಾಯಪುರ : ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಛತ್ತಿಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನ ಶುಕ್ತವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ.
 
ಸೌಮ್ಯಾ ಅವರನ್ನು ಬಂಧಿಸಿದ ಬಳಿಕ ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಕೇಂದ್ರ ಮೀಸಲು ಪೊಲೀಸ್ ಪಡೆ ಬೆಂಗಾವಲಿನಲ್ಲಿ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ನಲ್ಲಿ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಭಾರತ ಆಡಳಿತ ಸೇವೆಯ ಅಧಿಕಾರಿ ಸಮೀರ್ ವಿಷ್ಣೋಯ್ ಹಾಗೂ ಇತರ ಇಬ್ಬರನ್ನು ಬಂಧಿಸಿತ್ತು.

ಆದಾಯ ತೆರಿಗೆ ಇಲಾಖೆ ನೀಡಿದ್ದ ದೂರಿನ ಅನ್ವಯ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತ್ತು. ಛತ್ತಿಸ್ಗಢದಿಂದ ಸಾಗಾಣಿಕೆ ಮಾಡುವ ಪ್ರತಿ ಟನ್ ಕಲ್ಲಿದ್ದಲಿನ ಮೇಲೆ ಟನ್ಗೆ 25 ರೂ. ಅಕ್ರಮ ಚಂದಾ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ