ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭಿನ್ನಮತ ಸ್ಫೋಟ: ರಾಜೀನಾಮೆಗೆ ಮುಂದಾದ ಸುಧಾಕರ್ ರೆಡ್ಡಿ

ಶುಕ್ರವಾರ, 7 ಜುಲೈ 2017 (11:16 IST)
ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್`ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕ ಸುಧಾಕರ್ ರೆಡ್ಡಿ ಟ್ವೀಟ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಿಂದ ಆಗಮಿಸಿರುವ ನೂರಾರು ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಸದಾಶಿವನಗರದ ಸುಧಾಕರ್ ಅವರ ಮನೆ ಮುಂದೆ ಕುಳಿತು ರಾಜೀನಾಮೆ ನೀಡದಂತೆ ಒತ್ತಾಯಿಸಿದ್ದಾರೆ.

ಇತ್ತ, ಶಾಸಕರ ನಿವಾಸಕ್ಕೆ ಆಗಮಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ.

ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸುಧಾಕರ್ ರೆಡ್ಡಿ ಅವರ ತಂದೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಕೇಶವ್ ರೆಡ್ಡಿ ಪದಚ್ಯುತಿಗೆ ಒತ್ತಾಯ ಕೇಳಿಬಂದಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಸುಧಾಕರ್ ರೆಡ್ಡಿ, ತಂದೆಯನ್ನ ಪದಚ್ಯುತಿಗೊಳಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ