ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಾವಿನ್ನೂ ಮಕ್ಕಳ ಹಕ್ಕುಗಳ ಆಯೋಗದ ಪತ್ರದಲ್ಲಿ ಏನಿದೆ ಎಂದು ಓದಿಲ್ಲ ಓದಿದ ಬಳಿಕವೇ ಈ ಬಗ್ಗೆ ಪ್ರತಿಕ್ರಿಯಿಸಬಹುದಾಗಿದೆ. ಆಯೋಗ ನಿಜವಾಗಿ ಮದರಸಾಗಳನ್ನು ಬಂದ್ ಮಾಡುವ ಸಲಹೆ ನೀಡುವ ಬದಲು ಪರ್ಯಾಯ ಮಾರ್ಗಗಳ ಬಗ್ಗೆ ಸಲಹೆ ನೀಡಬಹುದಿತ್ತು. ವಿಪರ್ಯಾಸವೆಂದರೆ ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದ ಮದರಸಾ ಶಿಕ್ಷಕರ ವೇತನವನ್ನು ಮೂರು ಪಟ್ಟು ಹೆಚ್ಚಿಸಿತ್ತು. ಇದರ ಬೆನ್ನಲ್ಲೇ ಆಯೋಗ ಇಂತಹದ್ದೊಂದು ಸಲಹೆ ನೀಡಿರುವುದು ವಿಶೇಷ ಎಂದಿದ್ದಾರೆ.
ಬಿಜೆಪಿ ಮಿತ್ರ ಪಕ್ಷವಾಗಿರುವ ಜನ ಲೋಕಶಕ್ತಿ ಪಕ್ಷದ ನಾಯಕ ಎಕೆ ಬಾಜಪೇಯಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾವುದೇ ಮದರಸಾಗಳು ಕಾನೂನುಬಾಹಿರವಾಗಿ ನಡೆಸಲಾಗುತ್ತಿದೆ ಎಂದಾದರೆ ಬಂದ್ ಮಾಡಲು ಕ್ರಮ ಕೈಗೊಳ್ಳಬಹುದು. ಇಲ್ಲದೇ ಹೋದರೆ ವಿನಾಕಾರಣ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ ಎಂದಿದೆ.