ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದ ಸಿಟಿ ರವಿ

Sampriya

ಗುರುವಾರ, 19 ಡಿಸೆಂಬರ್ 2024 (16:44 IST)
Photo Courtesy X
ಬೆಳಗಾವಿ: ಅಂಬೇಡ್ಕರ್ ವಿರೋಧಿ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಕೇಳಿಬಂದಿದೆ.

ಇಂದು ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಶೂನ್ಯ ವೇಳೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿ ಮಾಡಿದರು. ಕೂಡಲೇ ಶಾ ಅವರು ಬಂಧಿಸಿ, ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಇದೇ ವೇಳೆ, ಬಿಜೆಪಿ ಸದಸ್ಯರು ಕೂಡ ಅಂಬೇಡ್ಕರ್ ಭಾವಚಿತ್ರ ಹಿಡಿದು ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.

ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ಡ್ರಗ್ ಅಡಿಕ್ಟ್‌  ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀರು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು.

ಆಗ ಸಿ.ಟಿ. ರವಿ, ಅಶ್ಲೀಲ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದು ಪ್ರಶ್ನಿಸಿದರು.  ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.‌

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ