ವಯನಾಡಿನ ಹಾಗೇ ಹಿಮಾಚಲ ಪ್ರದೇಶದಲ್ಲೂ ಭಾರೀ ದುರಂತ: ಇಬ್ಬರು ಸಾವು, 50 ಮಂದಿ ನಾಪತ್ತೆ

Sampriya

ಗುರುವಾರ, 1 ಆಗಸ್ಟ್ 2024 (18:59 IST)
Photo Courtesy X
ಹಿಮಾಚಲ ಪ್ರದೇಶ: ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಸುರಿದ ಭಾರೀ ಮಳೆಗೆ ಶಿಮ್ಲಾ, ಮಂಡಿ ಮತ್ತು ಕುಲು ಜಿಲ್ಲೆಗಳಲ್ಲಿ ಮೇಘಸ್ಫೋಟವಾಗಿ ಇಬ್ಬರು ಸಾವನ್ನಪ್ಪಿದ್ದು, 50 ಮಂದಿ ಕಾಣೆಯಾಗಿದ್ದಾರೆ. ರಾತ್ರಿಯ ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಪ್ರತಿಕ್ರಿಯಿಸಿ, ಇಲ್ಲಿಯವರೆಗೆ ಎರಡು ಮೃತ ದೇಹಗಳನ್ನು ಪತ್ತೆಯಾಗಿದ್ದು, 50 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ. ನಾವು ಸೇನೆ ಮತ್ತು ವಾಯುಪಡೆಯಿಂದ ಸಹಾಯ ಕೋರಿದ್ದೇವೆ. ರಾಜ್ಯಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದರು.

ಮುಂದಿನ 36 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದೀಗ ಉಕ್ಕಿ ಹರಿಯುತ್ತಿರುವ ನದಿಗಳಿಂದ ದೂರ ಉಳಿಯುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ ಎಂದು ಸುಖು ಸೇರಿಸಲಾಗಿದೆ.

ರಾಂಪುರ (ಶಿಮ್ಲಾ)ದ ಸಮೇಶ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 28 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಜೀವ್ ಕುಮಾರ್ ಗಾಂಧಿ ಪಿಟಿಐಗೆ ತಿಳಿಸಿದ್ದಾರೆ. ಸ್ಥಳದಿಂದ ಇಬ್ಬರನ್ನು ರಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ